ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಯರಿಗೆ ಖಾತೆಗೆ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುತ್ತಿದೆ. ಈ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ಅವಕಾಶ ಕಲ್ಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಎಲ್ಲಾ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ.
ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರ ಜೀವನದಲ್ಲಿ ಕಳೆದ ಒಂದು ವರ್ಷದಲ್ಲಿ ಏನೆಲ್ಲ ಬದಲಾವಣೆ ಆಗಿದೆ ಎನ್ನುವುದನ್ನು ಹಂಚಿಕೊಳ್ಳಲು ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಾದ ಯುಟ್ಯೂಬ್, ಫೇಸ್ಬುಕ್, ಇನ್ ಸ್ಟಾಗ್ರಾಂಗಳಲ್ಲಿ ರೀಲ್ಸ್ ಮಾಡಿ ಹಂಚಿಕೊಳ್ಳಲು ತಿಳಿಸಿದ್ದಾರೆ. ಯಾವ ಯಜಮಾನಿಯರು ಮಾಡಿದ ರೀಲ್ಸ್ ಹೆಚ್ಚು ವೀಕ್ಷಣೆ ಪಡೆಯುತ್ತದೆಯೋ ಅಂತ ಯಜಮಾನಿಯರಿಗೆ ಬಹುಮಾನ ಘೋಷಿಸಿದ್ದಾರೆ.
ಸೆಪ್ಟೆಂಬರ್ 30ರವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯೂಟ್ಯೂಬ್, ಫೇಸ್ಬುಕ್, ಇನ್ ಸ್ಟಾಗ್ರಾಂಗಳಲ್ಲಿ ಹಂಚಿಕೊಳ್ಳಬೇಕಿದೆ. ಅತಿ ಹೆಚ್ಚು ವೀಕ್ಷಣೆ ಪಡೆದ ವಿಡಿಯೋ ಮಾಡಿದ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಂದು ಬಹುಮಾನ ನೀಡಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಪಡೆದ ಮೊದಲ 50 ಯಜಮಾನಿಯರಿಗೆ ವೈಯಕ್ತಿಕವಾಗಿ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.