ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದನ್ನು ಖಂಡಿಸಿ, ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿ.ಟಿ.ರವಿ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಂಎಲ್ ಸಿ ಸಿ.ಟಿ.ರವಿ ಸುವರ್ಣಸೌಧಕ್ಕೆ ತಮ್ಮ ಕಾರಿನಲ್ಲಿ ಆಗಮಿಸುತ್ತಿದ್ದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು ಸಿ.ಟಿ.ರವಿ ಕಾರನ್ನು ತಡೆದು, ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಪೊಲೀಸರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಸುವರ್ಣ ಸೌಧದ ಬಳಿ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ಎಂಎಲ್ ಸಿ ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.