ವಿಜಯಪುರ: ಲಕ್ಷ್ಮಿ ಪೂಜೆ ಬಳಿಕ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ.
ನಿನ್ನೆ ಸಿದ್ದರಾಯ ಆಡಿನ ಎಂಬ ವ್ಯಕ್ತಿ ಲಕ್ಷ್ಮಿ ಪೂಜೆ ನಂತರ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಲೈಸೆನ್ಸ್ ಹೊಂದಿದ್ದ ಪಿಸ್ತೂಲ್ ನಿಂದ ಒಂದು ಸುತ್ತು ಫೈರಿಂಗ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ. ಸಿದ್ದರಾಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.