ಆರ್.ಜೆ.ಡಿ. ನಾಯಕ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನವದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ.
ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ರಾಂಚಿ ಆಸ್ಪತ್ರೆ ವೈದ್ಯರು ಏಮ್ಸ್ ಗೆ ದಾಖಲಿಸುವಂತೆ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಜೈಲಿನ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಅವರನ್ನು ಏಮ್ಸ್ ಗೆ ದಾಖಲಿಸಿದ್ದಾರೆ.
ಆರ್ಜೆಡಿ ನಾಯಕ ಹಾಗೂ ಲಾಲು ಅವರ ಪುತ್ರ ತೇಜಸ್ವಿ ಯಾದವ್ ಕೂಡ ದೆಹಲಿ ತೆರಳಿದ್ದಾರೆ. ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.