
ನವದೆಹಲಿ: ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಮಂಗಳವಾರ ಹಠಾತ್ ಹದಗೆಟ್ಟ ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾಲೂ ಯಾದವ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ವೈದ್ಯರ ತಂಡ ನಿಗಾ ವಹಿಸಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ.
ಸದ್ಯಕ್ಕೆ ಅವರ ಸ್ಥಿತಿ ಸ್ಥಿರವಾಗಿದೆ. ಲಾಲೂ ಯಾದವ್ ಅವರ ಕುಟುಂಬ ಸದಸ್ಯರು ಆಸ್ಪತ್ರೆಯಲ್ಲಿದ್ದಾರೆ. ಸೋಮವಾರ ಪಾಟ್ನಾದಿಂದ ದೆಹಲಿಗೆ ಆಗಮಿಸಿದ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು.
77 ವರ್ಷದ ಲಾಲೂ ಕಳೆದ ಕೆಲವು ವರ್ಷಗಳಲ್ಲಿ ಸಿಂಗಾಪುರದಲ್ಲಿ ಕಿಡ್ನಿ ಕಸಿ ಸೇರಿದಂತೆ ಹಲವು ಕಾಯಿಲೆಗಳಿಗೆ ಚಿಕಿತ್ಸೆ ಪಡೆದಿದ್ದರು.