ಒಂದಿಲ್ಲ ಒಂದು ಸುದ್ದಿಯಲ್ಲಿರೋ ಲಾಲೂ ಪ್ರಸಾದ್ ಯಾದವ್ ಈಗ ಮತ್ತೆ ಸುದ್ದಿಯಲ್ಲಿ ಇದ್ದಾರೆ. 13 ವರ್ಷಗಳ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್‌ಗೆ ಜಾರ್ಖಂಡ್‌ನ ಪಲಾಮುವಿನ ವಿಶೇಷ ನ್ಯಾಯಾಲಯ 6ಸಾವಿರ ದಂಡ ವಿಧಿಸಿದೆ.
2009 ರಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಪ್ರಸಾದ್ ಯಾದವ್ ವಿರುದ್ದ ಸಂಸದ ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಈ ವೇಳೆ ಲಾಲೂ ಪ್ರಸಾದ್ ಯಾದವ್ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅವರಿಗೆ 6ಸಾವಿರ ರೂ. ದಂಡ ವಿಧಿಸುವ ಮೂಲಕ ಪ್ರಕರಣ ಇತ್ಯರ್ಥಗೊಂಡಿದ್ದು, ಅವರು ಈಗ ಆರೋಪ ಮುಕ್ತರಾಗಿದ್ದಾರೆ ಎಂದು ಲಾಲೂ ಅವರ ವಕೀಲ ಧೀರೆಂದ್ರ ಕುಮಾರ್ ತಿಳಿಸಿದ್ದಾರೆ.