ಬೆಳಗಾವಿ: ವಿಧಾನಸಭೆಯಲ್ಲಿ ಭೂ ಕಂದಾಯ ತಿದ್ದುಪಡಿ ಎರಡನೇ ವಿಧೇಯಕ ಅಂಗೀಕಾರವಾಗಿದೆ. ಭೂ ಕಂದಾಯ ಕಾಯ್ದೆಯ ಸೆಕ್ಷನ್ 95, 96ಕ್ಕೆ ತಿದ್ದುಪಡಿ ತರುವ ಮೂಲಕ ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆಯ ಪ್ರಕ್ರಿಯೆ ಸರಳೀಕರಣ ಮಾಡಲಾಗಿದೆ.
ಕೃಷಿ ಭೂಮಿ ಕೈಗಾರಿಕೆ ಉದ್ದೇಶಗಳಿಗಾಗಿ ಪರಿವರ್ತಿಸಲು ಅನುಕೂಲವಾಗಲಿದೆ. ಕೃಷಿ ಭೂಮಿ ನಿವಾಸಿಗಳು ಸಂಪೂರ್ಣವಾಗಿ ಅಥವಾ ಭಾಗವಾಗಿ ಭೂ ಪರಿವರ್ತನೆ ವರ್ಗಾವಣೆ ಮಾಡಬಹುದು. ಬೇರೆ ಯಾವುದೇ ಉದ್ದೇಶಕ್ಕೆ ಬೇರೆಡೆಗೆ ವರ್ಗಾವಣೆ ಬಯಸಿದರೆ ಅಫಿಡವಿಟ್ ಸಲ್ಲಿಸಬೇಕಿದೆ. ಭೂ ಮಾಲೀಕರು ಅರ್ಜಿಯೊಂದಿಗೆ ಜಿಲ್ಲಾಧಿಕಾರಿಗೆ ಅಫಿಡವಿಟ್ ಸಲ್ಲಿಸಬಹುದು. ಅರ್ಜಿ ಸ್ವೀಕರಿಸಿದ ಏಳು ದಿನದಲ್ಲಿ ಜಿಲ್ಲಾಧಿಕಾರಿ ಪರಿಶೀಲಿಸಿ ಅನುಮೋದನೆ ನೀಡುವರು ಎಂದು ಹೇಳಲಾಗಿದೆ.