ಬೆಂಗಳೂರು: ತಲೆಮಾರುಗಳಿಂದ ಇನಾಂ ಭೂಮಿ ಉಳುಮೆ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ.
ಇನಾಂ ಭೂಮಿ ಉಳುಮೆ ಮಾಡುತ್ತಿರುವ ಭೂವಂಚಿತರಿಗೆ ಭೂಮಿ ಮರು ಮಂಜೂರು ಮಾಡಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲು ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ.
ಈ ಹಿಂದೆ ಇನಾಂ ಭೂಮಿ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಹೆಚ್ಚಿನ ರೈತರಿಗೆ ಮಾಹಿತಿ ಸಿಗದೇ ವಂಚಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.