ಚಿಕ್ಕಮಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಮಾಡಿದ ಆರೋಪದಡಿ ಮೂರು ಅಧಿಕರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ.
ಸರ್ಕಾರಿ ಭೂಮಿ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮೂರು ಅಧಿಕಾರಿಗಳ ವಿರುದ್ಧ ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ಮೇರೆಗೆ ತರೀಕೆರೆ ಉಪವಿಭಾಗಾಧಿಕಾರಿ ಕಾಂತರಾಜು, ಕಡೂರು ತಾಲೂಕು ಕಚೇರಿಯ ಹಿಂದಿನ ತಹಶೀಲ್ದಾರ್ ಉಮೇಶ್, ನಿವೃತ್ತ ಶಿರಸ್ತೇದಾರ್ ನಂಜುಂಡಯ್ಯ, ಆರ್ ಐ ಕಿರಣ್ ಕುಮಾರ್ ವಿರುದ್ಧ ದೂರು ದಾಖಲಾಗಿದೆ. ಆರೋಪಿ ಉಮೇಶ್ ಕಾರವಾರದ ಸೀಬರ್ಡ್ ನೌಕಾನೆಲೆ ಭೂ ಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತಿದ್ದಾರೆ.
ಕಡೂರಿನ ಉಳ್ಳಿನಾಗರ ಗ್ರಾಮದಲ್ಲಿ 5.4 ಎಕರೆ ಸರ್ಕಾರಿ ಭೂಮಿ ಕಬಳಿಕೆಗಾಗಿ ಖಾಸಗಿ ವ್ಯಕ್ತಿಗಳ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಂಜೂರು ಮಾಡಿದ್ದರು. ಕ್ರಿಮಿನಲ್ ಕೇಸ್ ದಾಖಲಾಗುತ್ತಿದ್ದಂತೆ ಮೂವರು ಅಧಿಕಾರಿಗಳು ನಾಪತ್ತೆಯಾಗಿದ್ದರೆ. ಆರೊಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.