ರಾಂಚಿ: ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ರಾಂಚಿ ನಿವಾಸದಲ್ಲಿ ಕೇಂದ್ರೀಯ ಸಂಸ್ಥೆಯಿಂದ 7 ಗಂಟೆಗಳ ಕಾಲ ವಿಚಾರಣೆಯ ನಂತರ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಮೊದಲು ಮುನ್ನೆಚ್ಚರಿಕೆ ಕ್ರಮವಾಗಿ ಸಿಎಂ ನಿವಾಸ ಮತ್ತು ರಾಜಭವನದ ಹೊರಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ಹೇಮಂತ್ ಬಂಧನದೊಂದಿಗೆ ಈ ಪ್ರಕರಣದಲ್ಲಿ ಇಡಿ ಇದುವರೆಗೆ 15 ಮಂದಿಯನ್ನು ಬಂಧಿಸಿದೆ.
ರಕ್ಷಣಾ ಪಡೆಗಳಿಗೆ ಸೇರಿದ ಭೂಮಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಹಣದಿಂದ ರಾಂಚಿ ಬಳಿಯ ಭೂಮಿ ಖರೀದಿಸಿದ ಆರೋಪದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.