ಬೆಳಗಾವಿ: ಹೊಲದಲ್ಲಿ ಮನೆ ನಿರ್ಮಾಣಕ್ಕೆ ಭೂ ಪರಿವರ್ತನೆ ಸಂಬಂಧ ಶೀಘ್ರವೇ ಕಾಯ್ದೆ ತರಲಾಗುವುದು ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಇದೇ ಅಧಿವೇಶನದಲ್ಲಿ ವಿಧೇಯಕ ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಕೃಷಿಯೇತರ ಭೂ ಪರಿವರ್ತನೆಗಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಣ ಮಾಡಲಾಗುವುದು. ಕೃಷಿ ಭೂಮಿಯಲ್ಲಿ ಶೇಕಡ 10ರಷ್ಟು ಮೀರದ ಜಾಗದಲ್ಲಿ ತೋಟದ ಮನೆ ನಿರ್ಮಿಸಿಕೊಳ್ಳಬಹುದು. ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದು ತಿಳಿಸಿದ್ದಾರೆ.