ಬೆಂಗಳೂರು: ಕೃಷಿ ಜಮೀನು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯೊಳಗಿದ್ದರೆ ನಿಗದಿತ ಶುಲ್ಕ ಪಡೆದು ಆ ಭೂಮಿಯನ್ನು ವಸತಿ ಉದ್ದೇಶಕ್ಕೆ ಬಳಕೆ ಮಾಡಲು ಭೂ ಪರಿವರ್ತನೆಗೆ ಅನುಮತಿ ನೀಡಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶ ನೀಡಿದೆ.
ಧಾರವಾಡದ ಶಬರಿ ನಗರದ ಜುನೈದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕ ಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 95ರ ಪ್ರಕಾರ ಕೃಷಿ ಜಮೀನು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿದ್ದರೆ ಅಂತಹ ಜಮೀನನ್ನು ಯಾವ ಉದ್ದೇಶಕ್ಕೆ ಗೊತ್ತುಪಡಿಸಲಾಗಿದೆಯೋ ಅದಕ್ಕಾಗಿ ಪರಿವರ್ತಿಸಲು ಕೋರಿದರೆ ದಂಡಪಾವತಿಯ ಷರತ್ತಿಗೆ ಒಳಪಟ್ಟು ಅನುಮತಿ ನೀಡಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.
ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯೊಳಗೆ ಇರುವ ಕೃಷಿ ಜಮೀನನ್ನು ನಿಗದಿತ ಶುಲ್ಕ ಪಡೆದು ವಸತಿ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆಗೆ ಅನುಮತಿ ನೀಡಬೇಕಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.