alex Certify ಉದ್ಯೋಗಾವಕಾಶ: ಭೂಮಾಪಕರ ಹುದ್ದೆಗೆ ಆನ್ ಲೈನ್ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾವಕಾಶ: ಭೂಮಾಪಕರ ಹುದ್ದೆಗೆ ಆನ್ ಲೈನ್ ಅರ್ಜಿ ಆಹ್ವಾನ

ಮಡಿಕೇರಿ: ಭೂಮಾಪನ ಇಲಾಖೆಯಲ್ಲಿ ಪರವಾನಗಿ ಭೂಮಾಪಕರ ಕೊರತೆಯಿರುವುದರಿಂದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಡಿಸೆಂಬರ್ 28 ರಂದು ಇಲಾಖಾ ಆಯುಕ್ತರ ಅಧಿಸೂಚನೆಯಂತೆ ಕೊಡಗು ಜಿಲ್ಲೆಗೆ 100 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಈ ಅರ್ಜಿಗಳನ್ನು at rdservices.karnataka.gov.in  ನಲ್ಲಿ ಜನವರಿ, 21 ರ ಸಂಜೆ 5 ಗಂಟೆ ಒಳಗೆ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಶುಲ್ಕ, ಶೈಕ್ಷಣಿಕ ವಿದ್ಯಾರ್ಹತೆ ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಮತ್ತಿತರ ಹೆಚ್ಚಿನ ಮಾಹಿತಿಗೆdio_kdg@nic.in ನ್ನು ಪರಿಶೀಲಿಸಬಹುದು ಅಥವಾ ಭೂದಾಖಲೆಗಳ ಉಪ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, 2 ನೇ ಮಹಡಿ ಕೊಠಡಿ ಸಂಖ್ಯೆ 15 ರಲ್ಲಿ ಕಚೇರಿ ಸಮಯದಲ್ಲಿ ಹಾಜರಾಗಿ ಮಾಹಿತಿ ಪಡೆಯಬಹುದು ಎಂದು ಭೂದಾಖಲೆಗಳ ಉಪ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...