ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಆಡುಗಳನ್ನು ಮೇಯಿಸುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಅಫ್ಘಾನಿಸ್ತಾನದ ಗಡಿಯಲ್ಲಿರುವ ಉತ್ತರ ವಜಿರಿಸ್ತಾನ್ ಬುಡಕಟ್ಟು ಜಿಲ್ಲೆಯ ಮಿರ್ ಅಲಿ ತಹಸಿಲ್ನಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
5 ರಿಂದ 15 ವರ್ಷದೊಳಗಿನ ಮೂವರು ಕುರಿಗಾಹಿ ಮಕ್ಕಳು ಖಜೋರಿ ಪ್ರದೇಶದ ಹೊಲಗಳಲ್ಲಿ ಆಡುಗಳನ್ನು ಮೇಯಿಸುತ್ತಿದ್ದರು ಮತ್ತು ಅದರಲ್ಲಿ ಒಬ್ಬ ನೆಲಬಾಂಬ್ ಮೇಲೆ ಕಾಲಿಟ್ಟಾಗ ಸ್ಪೋಟಗೊಂಡಿದೆ. ಮಕ್ಕಳ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.