
ಚಾಮರಾಜನಗರ: ಚಾಮರಾಜನಗರ ನಗರಸಭೆ ವತಿಯಿಂದ ಶೇ.24.10, 7.25 ಯೋಜನೆಗಳ 2020-21ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿ ನಗರಸಭಾ ಅನುದಾನಗಳ ಅನುಮೋದಿತ ಕ್ರಿಯಾ ಯೋಜನೆಯಂತೆ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಬಿ.ಇ, ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡಲು ಹಾಗೂ 5 ನೇ ತರಗತಿಯಿಂದ ಉನ್ನತ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಎರಡು ಭಾವಚಿತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವ್ಯಾಸಂಗ ದೃಢೀಕರಣ ಪತ್ರ, ಕಳೆದ ಸಾಲಿನ ಅಂಕ ಪಟ್ಟಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ, ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಲ್ಯಾಪ್‍ಟಾಪ್, ಸಹಾಯ ಧನ ಪಡೆದಿಲ್ಲದಿರುವ ಬಗ್ಗೆ ದೃಢೀಕರಣ ಪತ್ರಗಳನ್ನು ಡಿಸೆಂಬರ್ 31 ರೊಳಗೆ ಲಗತ್ತಿಸಿ ಅರ್ಜಿಸಲ್ಲಿಸಬೇಕು ಎಂದು ಚಾಮರಾಜನಗರ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.