ಬೆಂಗಳೂರು: ವಿಜಯನಗರ ಜಿಲ್ಲೆ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕಿ, ಮಾಜಿ ಡಿಸಿಎಂ ಎಂ.ಪಿ. ಪ್ರಕಾಶ್ ಪುತ್ರಿ ಎಂ.ಪಿ. ಲತಾ ಮಲ್ಲಿಕಾರ್ಜುನ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ.
ಲತಾ ಮಲ್ಲಿಕಾರ್ಜುನ್ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದರಿಂದ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಭೇಟಿ ಮಾಡಿದ ಲತಾ ಮಲ್ಲಿಕಾರ್ಜುನ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.