alex Certify PFI ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್; ಪರಿಸ್ಥಿತಿ ಉದ್ವಿಗ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

PFI ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್; ಪರಿಸ್ಥಿತಿ ಉದ್ವಿಗ್ನ

ಮಂಗಳೂರು: ಯುವಕರ ಮೇಲೆ ದುಷ್ಕರ್ಮಿಗಳಿಂದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪಿಎಫ್ಐ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿರುವ ಘಟನೆ ಮಂಗಳೂರಿನ ಉಪ್ಪಿನಂಗಡಿಯಲ್ಲಿ ನಡೆದಿದೆ.

ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ.

ಮನೆ ಹೊರಗೆ ಖಾಲಿ ರಟ್ಟಿನ ಬಾಕ್ಸ್ ಇಟ್ಟಿದ್ದ ವೃದ್ಧೆಗೆ 40,000 ರೂ. ದಂಡ..!

ಈ ವೇಳೆ 10ಕ್ಕೂ ಹೆಚ್ಚು ಪಿಎಫ್ಐ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಸಧ್ಯ ಉಪ್ಪಿನಂಗಡಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಠಾಣೆ ಸುತ್ತ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...