ಎಂ ಭರತ್ ರಾಜ್ ನಿರ್ದೇಶನದ ‘ಲಾಫಿಂಗ್ ಬುದ್ಧ’ ಚಿತ್ರ ನಿನ್ನೆಯಷ್ಟೇ ಬಿಡುಗಡೆಯಾಗಿದ್ದು, ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುವ ಮೂಲಕ ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ. ಈ ಸಿನಿಮಾದ ಎಲ್ಲಾ ಕಲಾವಿದರು ಅದ್ಭುತ ನಟನೆ ಮಾಡಿದ್ದು, ಕ್ಲೈಮ್ಯಾಕ್ಸ್ ದೃಶ್ಯ ಎಲ್ಲರ ಗಮನ ಸೆಳೆದಿದೆ.
ಫ್ಯಾಮಿಲಿ ಎಂಟರ್ಟೈನರ್ ಕಥಾಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ, ತೇಜು ಬೆಳವಾಡಿ, ಸುಂದರ್ ರಾಜ್, ಹಾಗೂ ದಿಗಂತ್ ಪ್ರಮುಖ ಪಾತ್ರದಲ್ಲಿದ್ದು, ರಿಷಬ್ ಶೆಟ್ಟಿ ತಮ್ಮ ರಿಶಬ್ ಶೆಟ್ಟಿ ಫಿಲಂಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ವಿಷ್ಣು ವಿಜಯ್ ಸಂಗೀತ ಸಂಯೋಜನೆ ನೀಡಿದ್ದು. ಕೆ ಎಂ ಪ್ರಕಾಶ್ ಸಂಕಲನ. ಅನಿರುದ್ಧ್ ಮಹೇಶ್, ಎಂ. ರಾಜ್, ಮತ್ತು ರಘು ನಿಡುವಳ್ಳಿ ಅವರ ಸಂಭಾಷಣೆ, ಎಸ್ ಚಂದ್ರಶೇಖರನ್ ಛಾಯಾಗ್ರಹಣ, ಭೂಷಣ್ ಮಾಸ್ಟರ್ ನೃತ್ಯ ನಿರ್ದೇಶನವಿದೆ.