ಪ್ರಮೋದ್ ಶೆಟ್ಟಿ ಅಭಿನಯದ ಭರತ್ ರಾಜ್ ನಿರ್ದೇಶನದ ‘ಲಾಫಿಂಗ್ ಬುದ್ಧ’ ಚಿತ್ರ ಪ್ರೇಕ್ಷಕರನ್ನು ಹೊಟ್ಟೆ ಉಣ್ಣಾಗಿಸುವಂತೆ ನಕ್ಕು ನಗಿಸಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ತಿಂಗಳು ಆಗಸ್ಟ್ 30 ರಂದು ತೆರೆಕಂಡಿದ್ದ ಈ ಸಿನಿಮಾ ಇದೀಗ 25 ದಿನಗಳನ್ನು ಪೂರೈಸಿದ್ದು, ಈ ಸಂತಸವನ್ನು ನಟಿ ತೇಜು ಬೆಳವಾಡಿ ತಮ್ಮ instagram ಖಾತೆಯಲ್ಲಿ ಶೇರ್ ಮಾಡಿದ್ದಾರೆ.
ಫ್ಯಾಮಿಲಿ ಎಂಟರ್ಟೈನರ್ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ರಿಷಬ್ ಶೆಟ್ಟಿ, ತಮ್ಮ ರಿಶಬ್ ಶೆಟ್ಟಿ ಫಿಲಂ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ಪ್ರಮೋದ್ ಶೆಟ್ಟಿ, ತೇಜು ಬೆಳವಾಡಿ, ಸುಂದರ್ ರಾಜ್ ಹಾಗೂ ದಿಗಂತ್ ಪ್ರಮುಖ ಪಾತ್ರದಲ್ಲಿದ್ದಾರೆ. ವಿಷ್ಣು ವಿಜಯ್ ಸಂಗೀತ ಸಂಯೋಜನೆ ನೀಡಿದ್ದು, ಕೆ ಎಂ ಪ್ರಕಾಶ್ ಸಂಕಲನ, ಚಂದ್ರಶೇಖರನ್ ಛಾಯಾಗ್ರಹಣ, ಹಾಗೂ ಭೂಷಣ್ ಮಾಸ್ಟರ್ ನೃತ್ಯ ನಿರ್ದೇಶನವಿದೆ.