ನವದೆಹಲಿ: ದೇಶದಲ್ಲಿ 1,02,400 ಆಕ್ಸಿಜನ್ ಸಿಲಿಂಡರ್ ಖರೀದಿಸಿ ರಾಜ್ಯಗಳಿಗೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ್ ಅಗರವಾಲ್ ತಿಳಿಸಿದ್ದಾರೆ.
ದೇಶಾದ್ಯಂತ ಆಕ್ಸಿಜನ್ ಉತ್ಪಾದನೆ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. 162 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ 52 ಮೆಡಿಕಲ್ ಘಟಕ ಕಾರ್ಯಾರಂಭ ಮಾಡಿವೆ. 162 ಉತ್ಪಾದನಾ ಘಟಕಗಳಿಂದ ಆಕ್ಸಿಜನ್ ಉತ್ಪಾದನೆಯಾದರೆ 154 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದನೆಯಾಗಲಿದೆ. ಶೀಘ್ರದಲ್ಲಿಯೇ ಎಲ್ಲಾ ಘಟಕಗಳ ಆರಂಭಕ್ಕೆ ಕ್ರಮಕೈಗೊಳ್ಳಲಾಗಿದೆ. ಆಕ್ಸಿಜನ್ ಸಿಲಿಂಡರ್ ಖರೀದಿಗೆ ಏಪ್ರಿಲ್ 21 ರಂದು ಆರ್ಡರ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.