ಬೆಂಗಳೂರು: ಕಾನೂನು ಮತ್ತು ನೀತಿ 2023 ರಚನೆ ಮಾಡುವ ಉದ್ದೇಶದಿಂದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ.
ಕಳೆದ ಸಂಪುಟ ಸಭೆಯ ಮುಂದೆ ಕಾನೂನು ಮತ್ತು ನೀತಿ 2023 ವಿಷಯ ಚರ್ಚೆಗೆ ಬಂದ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಅಗತ್ಯವಿದೆ ಎನ್ನುವ ಕಾರಣಕ್ಕೆ ಸಚಿವ ಸಂಪುಟ ಉಪ ಸಮಿತಿ ರಚಿಸಲು ತೀರ್ಮಾನಿಸಲಾಗಿತ್ತು.
ಅಂತೆಯೇ ಹೆಚ್.ಕೆ. ಪಾಟೀಲ್ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ. ಜಾರ್ಜ್, ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.