
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಗ್ಯಾಂಗ್ ಸ್ಟರ್ ಅನ್ಮೋಲ್ ಬಿಷ್ಣೋಯಿ ನನ್ನು ಬಂಧಿಸಲಾಗಿದೆ. ಇಂಟರ್ಫೋಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಲಾರೆನ್ಸ್ ಬಿಷ್ಣೋಯಿ ಕಿರಿಯ ಸಹೋದರ ಅನ್ನೋಲ್ ಬಿಷ್ಣೋಯಿಯನ್ನು ಬಂಧಿಸಲಾಗಿದೆ.
ಮಾಜಿ ಸಚಿವ ಬಾಬಾ ಸಿದ್ದಿಕಿ ಕೊಲೆ ಪ್ರಕರಣದಲ್ಲಿ ಅನ್ಮೋಲ್ ನನ್ನು ಬಂಧಿಸಲಾಗಿದೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿಯೂ ಅನ್ಮೋಲ್ ಬಂಧನವಾಗಿದೆ. ಮುಂಬೈ ಕ್ರೈಂ ಬ್ರಾಂಚ್ ಪೊಲೀಸರ ಮನವಿ ಮೇರೆಗೆ ಇಂಟರ್ಪೊಲ್ ಪೊಲೀಸರು ಅನ್ಮೋಲ್ ಬಂಧಿಸಿದ್ದಾರೆ. ಆತನನ್ನು ಇಂಟರ್ಫೋಲ್ ಪೊಲೀಸರು ಮುಂಬೈ ಪೊಲೀಸರಿಗೆ ಹಸ್ತಾಂತರ ಮಾಡಲಿದ್ದಾರೆ.
ಗುಪ್ತಚರ ಸಂಸ್ಥೆ ಮೂಲಗಳ ಪ್ರಕಾರ ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಯುನೈಟೆಡ್ ಸ್ಟೇಟ್ಸ್ನ ಕ್ಯಾಲಿಫೋರ್ನಿಯಾದಲ್ಲಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಮತ್ತು ಇತರ ಹಿಂಸಾತ್ಮಕ ಅಪರಾಧಗಳು ಸೇರಿದಂತೆ ಹಲವು ಪ್ರಮುಖ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ನಂತರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಎರಡು ವಾರಗಳ ಹಿಂದೆ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.
2022 ರಲ್ಲಿ ದಾಖಲಾದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಬಿಷ್ಣೋಯ್ ವಿರುದ್ಧ ಚಾರ್ಜ್ಶೀಟ್ಗಳನ್ನು ಸಲ್ಲಿಸಿದೆ. ಕಳೆದ ವರ್ಷ ನಕಲಿ ಪಾಸ್ಪೋರ್ಟ್ ಬಳಸಿ ಭಾರತದಿಂದ ಪಲಾಯನ ಮಾಡಿದ ಬಿಷ್ಣೋಯ್ ಕೆನಡಾದಲ್ಲಿ ಆಶ್ರಯ ಪಡೆದಿದ್ದ.
