ಬೆಂಗಳೂರು: ವಕೀಲೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಐಟಿ ಅಧಿಕಾರಿ ವರುಣ್ ಮಲ್ಲಿಕ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ವರುಣ್ ಮಲ್ಲಿಕ್ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಕೀಲೆಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ವರುಣ್ ವಲ್ಲಿಕ್ ಗೆ ಎರಡು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸುಚಿದ್ದಾರೆ