alex Certify BIG NEWS: ವಕೀಲನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ; ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡ ಹೈಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಕೀಲನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ; ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು: ಹೆಲ್ಮೆಟ್ ಧರಿಸದ ವಿಚಾರಕ್ಕೆ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದೆ.

ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಎಂಬುವವರ ಮೇಲೆ ಹೆಲ್ಮೆಟ್ ವಿಚಾರವಾಗಿ ಹಲ್ಲೆ ನಡೆಸಿದ್ದರು. ಹೆಲ್ಮೆಟ್ ಹಾಕಿಲ್ಲ ಎಂಬ ಕಾರಣಕ್ಕೆ ಪೊಲೀಸ್ ಸಿಬ್ಬಂದಿ ಅಮಾನುಷವಾಗಿ ಹಲ್ಲೆ ನಡೆಸಿದ್ದು ಆಘಾತಕಾರಿ ಎಂದು ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ನಾಗರಿಕ ಸಮಾಜದಲ್ಲಿ ಇಂತಹ ಘಟನೆ ನಡೆಯಬಾರದು. ವಕೀಲರಿಗೇ ಹೀಗಾದರೆ ಇನ್ನು ಜನಸಾಮಾನ್ಯರ ಕಥೆ ಏನು? ಎಂದು ಪ್ರಶ್ನಿಸಿದೆ. ಈ ಘಟನೆ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡಲು ಸೂಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...