
ಬೆಂಗಳೂರು: ಬೇಸಿಗೆ ಮುಗಿಯುವವರೆಗೆ ಮಾರ್ಚ್ 15 ರಿಂದ ಮೇ 31 ರವರೆಗೆ ರಾಜ್ಯದ ಜಿಲ್ಲಾ ಮತ್ತು ವಿಚಾರಧೀನ ನ್ಯಾಯಾಲಯಗಳಲ್ಲಿ ಕಲಾಪಕ್ಕೆ ಹಾಜರಾಗುವ ವೇಳೆ ವಕೀಲರು ಕಪ್ಪು ಕೋಟ್ ಧರಿಸುವುದರಿಂದ ವಿನಾಯಿತಿ ನೀಡಿ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ.
ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಕಪ್ಪು ಕೋಟ್ ಧರಿಸುವುದರಿಂದ ವಕೀಲರಿಗೆ ವಿನಾಯಿತಿ ನೀಡಬೇಕೆಂದು ಕೋರಿ ಬೆಂಗಳೂರು ವಕೀಲರ ಸಂಘ, ಕರ್ನಾಟಕ ವಕೀಲರ ಪರಿಷತ್ ನಿಂದ ಹೈಕೋರ್ಟ್ ಗೆ ಮನವಿ ಮಾಡಲಾಗಿತ್ತು.
ಈ ಮನವಿಯನ್ನು ಆಧರಿಸಿ ಹೈಕೋರ್ಟ್ ನ್ಯಾಯಾಲಯಗಳ ಕಲಾಪಕ್ಕೆ ಹಾಜರಾಗುವ ವೇಳೆ ವಕೀಲರು ಕಪ್ಪು ಕೋಟ್ ಧರಿಸಲು ವಿನಾಯಿತಿ ನೀಡಿದೆ. ಆದರೆ, ವಿನಾಯಿತಿ ಬಿಳಿ ಅಂಗಿ ಮತ್ತು ನೆಕ್ ಬ್ಯಾಂಡ್ ಧರಿಸುವುದಕ್ಕೆ ಅನ್ವಯಸುವುದಿಲ್ಲ ಎಂದು ತಿಳಿಸಲಾಗಿದೆ.
ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಹವಾನಿಯಂತ್ರಿತ ವ್ಯವಸ್ಥೆ ಇಲ್ಲ. ಈಗಾಗಲೇ ಬಿಸಿಲಿನ ಪ್ರಮಾಣ ಏರಿಕೆಯಾಗುತ್ತಿದ್ದು, ಬಿಳಿ ಬಟ್ಟೆ ಮೇಲೆ ಕಪ್ಪು ಕೋಟ್ ಮತ್ತು ಬ್ಯಾಂಡ್ ಹಾಕುವುದು ಕಷ್ಟ. ಹೀಗಾಗಿ ಕಪ್ಪು ಕೋಟ್ ಧರಿಸುವುದರಿಂದ ಬೇಸಿಗೆ ರಜಾ ಕಾಲ ಮುಗಿದು ನ್ಯಾಯಾಲಯಗಳು ಕೆಲಸ ಪುನರಾರಂಭಿಸುವವರೆಗೆ ಮಾರ್ಚ್ 15 ರಿಂದ ಅನ್ವಯವಾಗುವಂತೆ ವಿನಾಯಿತಿ ನೀಡಬೇಕೆಂದು ಮನವಿ ಮಾಡಲಾಗಿತ್ತು. ಇದಕ್ಕೆ ಅನುಮತಿ ನೀಡಲಾಗಿದೆ. ವಕೀಲರು ಕಪ್ಪು ಕೋಟ್ ಧರಿಸುವುದರಿಂದ ವಿನಾಯಿತಿ ನೀಡಿದ್ದು, ಬಿಳಿ ಶರ್ಟ್ ಮತ್ತು ನೆಕ್ ಬ್ಯಾಂಡ್ ಧರಿಸಲು ಈ ವಿನಾಯಿತಿ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ.