
ರಾಮನಗರ: ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ ರಾಮನಗರದ ಐಜೂರು ಠಾಣೆ ಪಿಎಸ್ಐ ಅಮಾನತು ಮಾಡಿದೆ.
ಬಿಜೆಪಿ ಮತ್ತು ಜೆಡಿಎಸ್ ವಕೀಲರ ಪ್ರತಿಭಟನೆಗೆ ಸಾಥ್ ನೀಡಿದ್ದು, ರಾಜಕೀಯ ತಿರುವು ಪಡೆದುಕೊಂಡಿತ್ತು. 40 ಮಂದಿ ವಕೀಲರ ಮೇಲೆ ಎಫ್ಐಆರ್ ದಾಖಲಿಸಿದ್ದ ಪಿಎಸ್ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಬೇಕೆಂದು ವಕೀಲರು ಪ್ರತಿಭಟನೆ ನಡೆಸಿದ್ದರು.
ಬೇರೆ ಬೇರೆ ಭಾಗಗಳಿಂದಲೂ ಬಂದಿದ್ದ ವಕೀಲರು ಹೋರಾಟ ಕೈಗೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ರಾತ್ರಿಯಿಡಿ ವಕೀಲರು ಮಲಗಿ ಪ್ರತಿಭಟನೆ ನಡೆಸಿದ್ದರು. ವಿಧಾನಸಭೆಯಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿತ್ತು.