ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯೇ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದು, ನಾಯಕತ್ವ ಕುರಿತ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ನೀವು ಉತ್ತಮ ಆಡಳಿತ ನೀಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಮಿತ್ ಶಾ ತಿಳಿಸಿದ್ದಾರೆ. ಎಲೆಕ್ಷನ್ ಮತ್ತು ರಾಜಕೀಯ ವಿಚಾರಗಳನ್ನು ನಮಗೆ ಬಿಟ್ಟು ನೀವು ಆಡಳಿತ ನೋಡಿಕೊಳ್ಳಿ. ನಿಮ್ಮ ಮತ್ತು ಬಿ.ಎಸ್. ಯಡಿಯೂರಪ್ಪನವರ ನಾಯಕತ್ವದಲ್ಲಿ ಚುನಾವಣೆ ನಡೆಸಲಾಗುತ್ತಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ಇಲ್ಲವೆಂದು ಸಂದೇಶ ರವಾನಿಸಿದ್ದಾರೆ.
ಬಿಜೆಪಿ ನಾಯಕರು ಕೂಡ ಇದೇ ಮಾತುಗಳನ್ನು ಪುನರುಚ್ಚರಿಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.