alex Certify ನಾಯಕತ್ವ ಬದಲಾವಣೆ: ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಿಂದು ನಿರ್ಣಾಯಕ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕತ್ವ ಬದಲಾವಣೆ: ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಿಂದು ನಿರ್ಣಾಯಕ ದಿನ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಇಂದು ಅಥವಾ ನಾಳೆ ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ವರಿಷ್ಠರ ಸೂಚನೆ ಪಾಲಿಸುವ ಸುಳಿವು ನೀಡಿದ್ದಾರೆ.

ಇಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಿರುವ ಸಿಎಂ ಸಮೀಕ್ಷೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಂಕಷ್ಟದಲ್ಲಿರುವವರಿಗೆ ನೆರವು ಘೋಷಿಸುವ ಸಾಧ್ಯತೆ ಇದೆ.

ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ನಾಳೆ ವಿದಾಯ ಭಾಷಣ ಮಾಡುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ. ನಾಯಕತ್ವ ಬದಲಾವಣೆಗೆ ಪೂರಕವಾದಂತಹ ಹಲವು ಬೆಳವಣಿಗೆಗಳು ನಡೆದಿವೆ. ಆದರೆ, ರಾಜ್ಯದಲ್ಲಿ ಸದ್ಯ ಪ್ರವಾಹ ಪರಿಸ್ಥಿತಿ ಇರುವುದರಿಂದ ತಕ್ಷಣಕ್ಕೆ ಸಿಎಂ ರಾಜೀನಾಮೆಗೆ ವರಿಷ್ಠರು ಸೂಚನೆ ನೀಡುವ ಸಾಧ್ಯತೆ ಇಲ್ಲ. ಯಡಿಯೂರಪ್ಪ ಅವರೇ ಮುಂದುವರೆಯುವ ಅವಕಾಶವೇ ಹೆಚ್ಚಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇವತ್ತು ಸಂಜೆಯೊಳಗೆ ಮಹತ್ವದ ಸಂದೇಶ ಬರುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಇಂದು ಅಥವಾ ನಾಳೆಯೊಳಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಸ್ಪಷ್ಟ ಚಿತ್ರಣ ಸಿಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...