alex Certify ಲಿಂಗಾಯತ ಸಮುದಾಯದ ಸಾಲು ಸಾಲು ನಾಯಕರ ನಷ್ಟ: ಬಿಜೆಪಿಗೆ ಭಾರೀ ಸಂಕಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಿಂಗಾಯತ ಸಮುದಾಯದ ಸಾಲು ಸಾಲು ನಾಯಕರ ನಷ್ಟ: ಬಿಜೆಪಿಗೆ ಭಾರೀ ಸಂಕಷ್ಟ

ಬೆಂಗಳೂರು: ಕಿತ್ತೂರು ಕರ್ನಾಟಕ ಭಾಗದಲ್ಲಿ ಪ್ರಬಲ ಲಿಂಗಾಯಿತ ಸಮುದಾಯದ ಬೆಂಬಲ ಬಿಜೆಪಿಗೆ ಹೆಚ್ಚಾಗಿತ್ತು. ಹೀಗಾಗಿ ಈ ಭಾಗದಿಂದ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸುತ್ತಿತ್ತು.

ಲಿಂಗಾಯಿತ ಸಮುದಾಯದ ಹಿರಿಯ ನಾಯಕರಾದ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ, ರಾಜ್ಯ ಸಚಿವರಾಗಿದ್ದ ಉಮೇಶ್ ಕತ್ತಿ, ರಾಜ್ಯಸಭೆ ಸದಸ್ಯರಾಗಿದ್ದ ಪ್ರಭಾಕರ ಕೋರೆ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಸಿ.ಸಿ. ಪಾಟೀಲ್, ಮುರುಗೇಶ್ ನಿರಾಣಿ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿಧಾನಸಭೆ ಉಪಾಧ್ಯಕ್ಷರಾಗಿದ್ದ ಮಾಮನಿ ಮೊದಲಾದವರು ಬಿಜೆಪಿಗೆ ಭದ್ರ ಬುನಾದಿ ಕಲ್ಪಿಸಿದ್ದರು.

ಇವರಲ್ಲಿ ಸುರೇಶ ಅಂಗಡಿ ಮತ್ತು ಮಾಮನಿ ನಿಧನರಾಗಿದ್ದಾರೆ. ಪ್ರಭಾಕರ ಕೋರೆ ತಟಸ್ಥರಾಗಿದ್ದಾರೆ. ಪ್ರಭಾವಿ ನಾಯಕರಾದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮುರುಗೇಶ್ ನಿರಾಣಿ, ಸಿ.ಸಿ. ಪಾಟೀಲ್, ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಲ್ಲಿದ್ದಾರೆ. ಯತ್ನಾಳ್ ಮತ್ತು ನಿರಾಣಿ ಅವರಲ್ಲಿ ಹೊಂದಾಣಿಕೆ ಇಲ್ಲ. ಒಂದೇ ಪಕ್ಷದಲ್ಲಿದ್ದರೂ ಬದ್ಧವೈರಿಗಳಂತಾಗಿದ್ದಾರೆ. ಸಿ.ಸಿ. ಪಾಟೀಲ್ ಗದಗ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದಾರೆ.

ಇದರಿಂದಾಗಿ ಬಿಜೆಪಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾಯಕತ್ವ ನಷ್ಟವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲಿಂಗಾಯಿತ ಸಮುದಾಯದ ಬೆಂಬಲ ಮುಂದುವರೆಯುವಂತೆ ನೋಡಿಕೊಳ್ಳುವ ಕಾರ್ಯತಂತ್ರ ರೂಪಿಸಿದ್ದಾರೆ. ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿಡಿತ ಬಂದಿದ್ದು, ಪ್ರಚಾರ ಮತ್ತು ಚುನಾವಣೆಯ ರಣತಂತ್ರ ರೂಪಿಸುವಲ್ಲಿ ಯಡಿಯೂರಪ್ಪನವರಿಗೆ ಹೆಚ್ಚಿನ ಒತ್ತು ನೀಡಿ ಅವರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...