ಹುಬ್ಬಳ್ಳಿ : ಜುಲೈ 18 ರಂದು ವಿಪಕ್ಷ ನಾಯಕನ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿಪಕ್ಷ ನಾಯಕನ ಆಯ್ಕೆ ಬಗ್ಗೆ ವರಿಷ್ಠರು ನಿರ್ಧರಿಸಲಿದ್ದು, ಜುಲೈ 18 ರಂದು ವಿಪಕ್ಷ ನಾಯಕನ ಸ್ಥಾನ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ನಮ್ಮ ವರಿಷ್ಠರು ಮತ್ತು ದೇವೇಗೌಡರ ಜೊತೆಗೆ ಮಾತುಕತೆ ನಡೆದಿದೆ.ಈಗಾಗಲೇ ಹೆಚ್.ಡಿ.ದೇವೇಗೌಡರು ಕೆಲವೊಂದು ಭಾವನೆ ವ್ಯಕ್ತಪಡಿಸಿದ್ದಾರೆ. ಮಾತುಕತೆ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ಆಗುತ್ತದೆ ಎಂದರು.