ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳನ್ನು ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಒಂದಿಬ್ಬರು ಶಾಸಕರು ಬಹಿರಂಗ ಹೇಳಿಕೆ ನೀಡಿದ್ದಾರೆ. ಶಾಸಕರು ಬಹಿರಂಗ ಹೇಳಿಕೆ ಕೊಡಬಾರದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಅನೇಕ ಸಲ ಪುನರುಚ್ಛರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಹ್ಲಾದ್ ಜೋಶಿ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.