ಬೆಂಗಳೂರು: ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 2 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ರಾಜ್ಯದ 14 ಕ್ಷೇತ್ರಗಳಲ್ಲಿ ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಮತದಾನದ ದಿನದಂದು ವೇತನ ಸಹಿತ ರಜೆ ಘೋಷಿಸಲಾಗಿದೆ.
ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.
ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಾಲೀಕರು/ನಿಯೋಜಕರು ಕಾರ್ಮಿಕರಿಗೆ ಮತದಾನದಲ್ಲಿ ಪಾಲ್ಗೊಳ್ಳಲು ವೇತನ ಸಹಿತ ರಜೆ ನೀಡುವಂತೆ ಹಾಗೂ ವೇತನ ಸಹಿತ ರಜೆ ಆದೇಶ ಉಲ್ಲಂಘಿಸಿದ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.