ಬೆಂಗಳೂರು : ತರಾತುರಿಯಲ್ಲಿ ನಮ್ಮ ಪಕ್ಷ ತೊರೆದಿರುವುದು ಜಗದೀಶ್ ಶೆಟ್ಟರ್ ಘನತೆಗೆ ಶೋಭೆ ತರುವುದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾದ ಕುರಿತು ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದರು.
ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದಿದ್ದು ದುಃಖಕರ . ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅವರದ್ದೇ ಮತ ಕ್ಷೇತ್ರದಲ್ಲಿ ಟಿಕೆಟ್ ನೀಡದೆ ವಂಚನೆ ಮಾಡಿತ್ತು. ಆ ವೇಳೆ ಕಾಂಗ್ರೆಸ್ ಪಕ್ಷ ಅವರನ್ನು ಬರ ಮಾಡಿಕೊಂಡು, ಟಿಕೆಟ್ ನೀಡಿ ಗೌರವಿಸಿತ್ತು. ಅವರು ಚುನಾವಣೆಯಲ್ಲಿ ಪರಾಭವಗೊಂಡರು ಅವರನ್ನು ವಿಧಾನಪರಿಷತ್ತಿನ ಸದಸ್ಯರನ್ನಾಗಿ ಮಾಡಿದ್ದೆವು. ಈಗ ತರಾತುರಿಯಲ್ಲಿ ನಮ್ಮ ಪಕ್ಷ ತೊರೆದಿರುವುದು ಅವರ ಘನತೆಗೆ ಶೋಭೆ ತರುವುದಿಲ್ಲ! ಎಂದಿದ್ದಾರೆ.