ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಸರ್ಕಾರಿ ಪದವಿ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜು ಅವರ ಮೇಲೆ ಹಲ್ಲೆ ನಡೆದಿದ್ದು, ದೂರು, ಪ್ರತಿ ದೂರು ದಾಖಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಮತ್ತು ಆತನ ತಂದೆಯ ವಿರುದ್ಧ ರಾಜು ದೂರು ನೀಡಿದ್ದು, ವಿದ್ಯಾರ್ಥಿಯ ಪೋಷಕರು ಪ್ರತಿ ದೂವರು ದಾಖಲಿಸಿದ್ದಾರೆ. ಹಾಜರಾತಿ ಕೊರತೆ ಕಾರಣಕ್ಕೆ ಪರೀಕ್ಷೆಗೆ ಅವಕಾಶ ನಿರಾಕರಿಸಿದ್ದರಿಂದ ಕೋಪಗೊಂಡ ವಿದ್ಯಾರ್ಥಿ ಮತ್ತು ಆತನ ತಂದೆ ಉಪನ್ಯಾಸಕ ರಾಜು ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಹಾಜರಾತಿ ಕಡಿಮೆ ಇದ್ದ ಕಾರಣಕ್ಕೆ ಶುಕ್ರವಾರ ನಡೆದ ಇತಿಹಾಸ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಅವಕಾಶ ನಿರಾಕರಿಸಲಾಗಿತ್ತು. ತಂದೆ ವಿಜಯಕುಮಾರ್ ಜೊತೆಗೆ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿ ರಾಜು ಅವರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಗಾಯಗೊಂಡ ರಾಜು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.
ಪ್ರಶ್ನಿಸಲು ಹೋದ ನಮ್ಮ ಮೇಲೆಯೇ ಉಪನ್ಯಾಸಕ ರಾಜು ಹಲ್ಲೆ ಮಾಡಿರುವುದಾಗಿ ವಿದ್ಯಾರ್ಥಿಯ ತಂದೆ ವಿಜಯಕುಮಾರ್ ದೂರು ನೀಡಿದ್ದಾರೆ. ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.