ಬೀದರ್: ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಬೀದರ್ ನಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವ ಪ್ರಶ್ನೆಯೇ ಇಲ್ಲ. ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೇಳಿದ್ದಾರೆ.
ಅತಿಥಿ ಉಪನ್ಯಾಸಕರ ಸಂಭಾವನೆ ಹೆಚ್ಚಳ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.