alex Certify ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹತಾ ಪರೀಕ್ಷೆ: ಅರ್ಜಿ ಸಲ್ಲಿಕೆ, ಪಠ್ಯಕ್ರಮದ ಬಗ್ಗೆ ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹತಾ ಪರೀಕ್ಷೆ: ಅರ್ಜಿ ಸಲ್ಲಿಕೆ, ಪಠ್ಯಕ್ರಮದ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ನವೆಂಬರ್ 26ರಂದು ನಡೆಯಲಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ಮೂಲಕ ಆನ್ಲೈನ್ ಹಾಗೂ ಗಣಕೀಕೃತ ಅಂಚೆ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು. ಇ- ಪೋಸ್ಟ್ ಕಚೇರಿಗಳಲ್ಲಿ ಅಕ್ಟೋಬರ್ 3 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.

ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿಪಡಿಸಿಲ್ಲ. ನವೆಂಬರ್ 26ರಂದು ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಪತ್ರಿಕೆ -1 100 ಅಂಕಗಳಿಗೆ(50 ಪ್ರಶ್ನೆ ಒಳಗೊಂಡಿರುತ್ತದೆ) ನಡೆಯಲಿದೆ. ಮಧ್ಯಾಹ್ನ 12 ರಿಂದ 2 ಗಂಟೆಯವರೆಗೆ 200 ಅಂಕಗಳಿಗೆ(100 ಪ್ರಶ್ನೆ ಒಳಗೊಂಡ) ಪತ್ರಿಕೆ 2 ನಡೆಯಲಿದೆ. ತಪ್ಪಾದ ಉತ್ತರಗಳಿಗೆ ಋಣಾತ್ಮಕ ಮೌಲ್ಯಮಾಪನ ಇರುವುದಿಲ್ಲ. ಪ್ರಾಧಿಕಾರದ ವೆಬ್ಸೈಟ್ http:/kea.kar.nic.in ನಲ್ಲಿ ಪಠ್ಯಕ್ರಮ ಪ್ರಕಟಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...