ಪದವಿ ಪೂರ್ವ ಕಾಲೇಜುಗಳಲ್ಲಿ 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಚಾಲನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಸೂಚನೆ ನೀಡಿದೆ.

2023 -24ನೇ ಶೈಕ್ಷಣಿಕ ಸಾರಿಗೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ.

ಬಡ್ತಿ, ನಿಧನ, ವಯೋ ನಿವೃತ್ತಿ, ಖಾಲಿ ಇರುವ ಹುದ್ದೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಕಾರ್ಯಭಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಒಟ್ಟಾರೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ತಿಳಿಸಲಾಗಿದೆ.

ಸಂಬಂಧಿಸಿದ ಜಿಲ್ಲಾ ಉಪ ನಿರ್ದೇಶಕರಿಗೆ, ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದ್ದು, ತಿಂಗಳಿಗೆ 12,000 ರೂ.ವೇತನದಂತೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಕಳೆದ ಬಾರಿ ನೇಮಕಾತಿ ಸಂದರ್ಭದಲ್ಲಿ ನಿಯಮ ಪಾಲನೆಯಾಗಿಲ್ಲ ಎಂಬ ಆರೋಪವಿದ್ದು, ಈ ಬಾರಿ ನಿಯಮ ನಿಯಮ ಉಲ್ಲಂಘಿಸಿದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read