alex Certify ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ –ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ –ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿ ರಚಿಸಲಾಗಿದ್ದು, ತನಿಖೆ ಚುರುಕಾಗಿ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ಯಾರೇ ತಪ್ಪಿತಸ್ಥರು ಎಂದು ಕಂಡುಬಂದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ಇತ್ತು. ಕಾನೂನನ್ನು ಗೌರವಿಸುವವರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...