ಬೆಂಗಳೂರು : ಅಡ್ಡಮತದಾನ ಮಾಡಿದ ಶಾಸಕ ಎಸ್.ಟಿ ಸೋಮಶೇಖರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಡ್ಡಮತದಾನ ಮಾಡಿದ ಶಾಸಕ ಸೋಮಶೇಖರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ, ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಸೋಮಶೇಖರ್ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ವೋಟ್ ಹಾಕಬಹುದಿತ್ತು ಎಂದು ಹೇಳಿದ್ದಾರೆ. ಪಕ್ಷಕ್ಕೆ ದ್ರೋಹ ಮಾಡಿದವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು. ಸೋಮಶೇಖರ್ ಅಡ್ಡಮತದಾನ ಮಾಡಿರುವ ಬಗ್ಗೆ ನಾವು ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಆರ್ ಅಶೋಕ್ ಹೇಳಿದರು.
ಹಾಗೂ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಮೂಲಕ ಕಾಂಗ್ರೆಸ್ ಗೆ ಮತ ಹಾಕಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿ, ಕಾಂಗ್ರೆಸ್ ಗೆ ಮತಚಲಾವಾಣೆ ಮಾಡಿದ್ದು, ಪಕ್ಷಕ್ಕೆ ಮಾಡಿರುವ ದ್ರೋಹ ಎಂದು ಕಾರ್ಯಕರ್ತರು ಕಿಡಿಕಾರಿದ್ದಾರೆ. ಯಶವಂತಪುರ, ಕೆಂಗೇರಿ ಉಪನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.