ಬೆಂಗಳೂರು : ಖಾಸಗಿ ಆಸ್ಪತ್ರೆಗಳು ವಿಸ್ತೃತ ಬಿಲ್ ನೀಡದಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
ಖಾಸಗಿ ವೈದ್ಯಕೀಯ ಸಂಸ್ಥೆಗಳು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಕಾಯ್ದೆ 2017ರ ಅನ್ವಯ ಚಿಕಿತ್ಸೆಗಳಿಗೆ ಸಂಬಂಧಿಸಿದಂತೆ ಕಡ್ಡಾಯವಾಗಿ ವಿಸ್ತೃತ ಬಿಲ್ ನೀಡಬೇಕು. ವಿವಿಧ ಶುಲ್ಕಗಳನ್ನು ಜಾಲತಾಣ, ಸೂಚನಾ ಫಲಕಗಳಲ್ಲಿ ಪ್ರಕಟಿಸಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.