ರಾಯ್ಪುರ್: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ತಂದೆ ನಂದ ಕುಮಾರ್ ಬಘೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.
ಸರ್ವ ಬ್ರಾಹ್ಮಣ ಸಮಾಜ ತನ್ನ ದೂರಿನಲ್ಲಿ, ಸಿಎಂ ತಂದೆ ಇತ್ತೀಚೆಗೆ ಬ್ರಾಹ್ಮಣರು ವಿದೇಶಿಯರೆಂದು ಅವರನ್ನು ಬಹಿಷ್ಕರಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ ಮತ್ತು ಬ್ರಾಹ್ಮಣರನ್ನು ತಮ್ಮ ಗ್ರಾಮಗಳಿಗೆ ಪ್ರವೇಶಿಸದಂತೆ ಜನರನ್ನು ಕೇಳಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಬ್ರಾಹ್ಮಣರನ್ನು ದೇಶದಿಂದ ಹೊರಹಾಕುವಂತೆ ನಂದಕುಮಾರ್ ಬಘೇಲ್ ಜನರನ್ನು ಕೇಳಿಕೊಂಡಿರುವುದಾಗಿ ಆರೋಪಿಸಲಾಗಿದೆ.
ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿಎಂ ಭೂಪೇಶ್, “ಮುಖ್ಯಮಂತ್ರಿಯಾಗಿ ವಿವಿಧ ಸಮುದಾಯಗಳ ನಡುವೆ ಸಾಮರಸ್ಯವನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ನನ್ನ ಮೇಲಿದೆ. ನನ್ನ ತಂದೆ ಒಂದು ಸಮುದಾಯದ ವಿರುದ್ಧ ಟೀಕೆ ಮಾಡಿರುವುದಕ್ಕೆ ವಿಷಾದಿಸುತ್ತೇನೆ. ಅಲ್ಲದೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.
BIG BREAKING: 5 ಸಾವಿರ ಶಿಕ್ಷಕರ ನೇಮಕಾತಿ, ಸಿಎಂ ಬೊಮ್ಮಾಯಿ ಮಾಹಿತಿ; ಸವಾಲು ಎದುರಿಸಲು ಮಕ್ಕಳನ್ನು ಸಜ್ಜುಗೊಳಿಸಲು ಕರೆ
ಇನ್ನು ಈ ಹಿಂದೆ ಕೂಡ ಸಿಎಂ ತಂದೆ ಶ್ರೀ ರಾಮಚಂದ್ರನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇತ್ತೀಚೆಗೆ, ಉತ್ತರ ಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾಗ ನಂದಕುಮಾರ್ ಬಘೇಲ್ ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.