
ಬೆಂಗಳೂರು: ವಿಧಾನ ಪರಿಷತ್ ಗೆ ಆಯ್ಕೆಯಾದ 17 ನೂತನ ಸದಸ್ಯರು ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನೂತನ ಸದಸ್ಯರಾಗಿ ಐವಾನ್ ಡಿ’ ಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಲೀಸ್ ಬಾನು, ಎನ್.ಎಸ್. ಬೋಸರಾಜು, ಡಾ. ಯತೀಂದ್ರ ಎಸ್., ಎ. ವಸಂತ ಕುಮಾರ, ಮೂಳೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ.ರವಿ ಮತ್ತು ಎನ್.ರವಿಕುಮಾರ್ ಪ್ರಮಾಣವಚನ ಸ್ವೀಕರಿಸಿದರು.
ಇದೇ ವೇಳೆ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾದ ಚಂದ್ರಶೇಖರ ಪಾಟೀಲ ಬಸವರಾಜ, ಡಾ: ಧನಂಜಯ್ ಸರ್ಜಿ, ರಾಮೋಜಿಗೌಡ, ಎಸ್.ಎಲ್. ಭೋಜೇಗೌಡ, ಕೆ. ವಿವೇಕಾನಂದ ಹಾಗೂ ಡಿ.ಟಿ.ಶ್ರೀನಿವಾಸ ವಿಧಾನ ಪರಿಷತ್ ನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.