ಬೆಂಗಳೂರು: ವಿಧಾನ ಪರಿಷತ್ ನಾಮ ನಿರ್ದೇಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂವರ ಹೆಸರು ಅಂತಿಮಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಸಚಿವೆ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹೆಸರು ಫೈನಲ್ ಆಗಿದ್ದು, ಮಾಜಿ ಇಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರು ಬಹುತೇಕ ಅಂತಿಮವಾಗಿದೆ.
ಸೋಮವಾರ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರನ್ನು ಭೇಟಿಯಾಗಿ ವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯರ ಆಯ್ಕೆ ಬಗ್ಗೆ ಪತ್ರ ನೀಡುವ ಸಾಧ್ಯತೆ ಇದೆ.