ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಜುಲೈ 15 ರಿಂದ ಆರಂಭವಾಗುವ ಸಾಧ್ಯತೆ ಇದೆ.
ವಿಧಾನಸಭೆ ಅಧ್ಯಕ್ಷರ ಕಚೇರಿಯಲ್ಲಿ ಜುಲೈ 15 ರಿಂದ 10 ದಿನಗಳ ಕಾಲ ಮಳೆಗಾಲದ ಅಧಿವೇಶನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆಂಗಲ್ ಗೇಟ್ ನಿಂದ ವಿಧಾನಸಭೆ ಸಭಾಂಗಣ ಪ್ರವೇಶಿಸುವ ಮುಖ್ಯದ್ವಾರವನ್ನು ರೋಸ್ ವುಡ್ ನಿಂದ ನಿರ್ಮಿಸಿದ್ದು, ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುವ ಸಾಧ್ಯತೆ ಇದೆ
ಇನ್ನು ಈ ಬಾರಿ ಅಧಿವೇಶನದಲ್ಲಿ ಸಮಯ, ಶೋಭೆ, ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವವರನ್ನು ಉತ್ತೇಜಿಸಲು ಕಳೆದ ಅಧಿವೇಶನದಲ್ಲಿ ಕಪ್ ಗಿಫ್ಟ್ ನೀಡಲಾಗಿತ್ತು. ಈ ಬಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಲಾಂಛನಗಳ ಒಳಗೊಂಡ ಪ್ಲೇಟ್ ಗಳನ್ನು ನೀಡಲಾಗುವುದು ಎಂದು ಹೇಳಲಾಗಿದೆ.