ಬೆಂಗಳೂರು : ಡಿ.4ರಿಂದ 15ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಡಿ.4ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಸುವರ್ಣಸೌಧಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಸುವರ್ಣಸೌಧ ಭದ್ರತೆಗೆ 3,500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಬೇರೆ ಬೇರೆ ಜಿಲ್ಲೆಗಳಿಂದ ಬರುವ ಸಿಬ್ಬಂದಿಗೆ ಎಲ್ಲ ವ್ಯವಸ್ಥೆಗೆ ಸೂಚನೆ ನೀಡಲಾಗಿದೆ. ಊಟ, ವಸತಿ ವ್ಯವಸ್ಥಿತವಾಗಿ ಕಲ್ಪಿಸುವಂತೆ ಸೂಚನೆ ನೀಡಿದ್ದೇನೆ. ಭದ್ರತೆ, ಆಂತರಿಕ ವಿಚಾರ ಸೇರಿದಂತೆ ಬಿಗಿ ಭದ್ರತೆ ಮಾಡಿಕೊಳ್ಳುತ್ತೇವೆ. ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಅವರು ಹೇಳಿದರು.