alex Certify ಡಿ.4ರಿಂದ ವಿಧಾನಮಂಡಲ ಅಧಿವೇಶನ : ಸುವರ್ಣಸೌಧಕ್ಕೆ ಬಿಗಿ ಪೊಲೀಸ್ ಭದ್ರತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.4ರಿಂದ ವಿಧಾನಮಂಡಲ ಅಧಿವೇಶನ : ಸುವರ್ಣಸೌಧಕ್ಕೆ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು : ಡಿ.4ರಿಂದ 15ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಡಿ.4ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಸುವರ್ಣಸೌಧಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಸುವರ್ಣಸೌಧ ಭದ್ರತೆಗೆ 3,500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಬೇರೆ ಬೇರೆ ಜಿಲ್ಲೆಗಳಿಂದ ಬರುವ ಸಿಬ್ಬಂದಿಗೆ ಎಲ್ಲ ವ್ಯವಸ್ಥೆಗೆ ಸೂಚನೆ ನೀಡಲಾಗಿದೆ. ಊಟ, ವಸತಿ ವ್ಯವಸ್ಥಿತವಾಗಿ ಕಲ್ಪಿಸುವಂತೆ ಸೂಚನೆ ನೀಡಿದ್ದೇನೆ. ಭದ್ರತೆ, ಆಂತರಿಕ ವಿಚಾರ ಸೇರಿದಂತೆ ಬಿಗಿ ಭದ್ರತೆ ಮಾಡಿಕೊಳ್ಳುತ್ತೇವೆ. ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಅವರು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...