ನವದೆಹಲಿ: ವಿಮಾನದ ಇಂಜಿನ್‌ಗೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲೇಹ್ ಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ.
SG123 ವಿಮಾನವು 10.29 ಕ್ಕೆ ಟೇಕ್ ಆಫ್ ಆಗಿ 11 ಗಂಟೆಗೆ ಸುರಕ್ಷಿತವಾಗಿ ಇಳಿಯಿತು. ಎಂಜಿನ್ 2 ನಲ್ಲಿ ಹಕ್ಕಿ ಡಿಕ್ಕಿ ಹೊಡೆದ ನಂತರ ದೆಹಲಿಗೆ ಮರಳಿತು. ವಿಮಾನವು ದೆಹಲಿಯಲ್ಲಿ ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರು, ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.
ದೆಹಲಿಯಲ್ಲಿ ನಡೆದ ಘಟನೆಯಿಂದಾಗಿ ಲೇಹ್‌ನಿಂದ ಮಧ್ಯಾಹ್ನ 12.20ಕ್ಕೆ ರಾಷ್ಟ್ರ ರಾಜಧಾನಿಗೆ ತೆರಳಬೇಕಿದ್ದ ವಿಮಾನವನ್ನು ರದ್ದುಗೊಳಿಸಲಾಗಿದೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ಲೇಹ್ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಮೈದಾನದ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು.