ಬೆಳಗಾವಿ: ಆಗಸ್ಟ್ 5 ರಂದು ಬೆಳಗಾವಿಯ ಜಾಧವನಗರದಲ್ಲಿ ಚಿರತೆ ಪ್ರತ್ಯಕ್ಷವಾದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ದಿನ ಕಳೆದರೂ ಚಿರತೆ ಪ್ರತ್ಯಕ್ಷವಾಗದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಗಾಲ್ಫ್ ಮೈದಾನದ ಒಂದು ಕಿಲೋಮೀಟರ್ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. 22 ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಇಂದು ಸಹ ರಜೆ ಮುಂದುವರಿಸಲಾಗಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.
ಗಾಲ್ಫ್ ಮೈದಾನದ ಟ್ರ್ಯಾಪ್ ಕ್ಯಾಮರಾದಲ್ಲಿ ಚಿರತೆಯ ಚಲನವಲನ ಪತ್ತೆಯಾಗಿದೆ. ಗಾಲ್ಫ್ ಮೈದಾನದಲ್ಲಿ 8ಟು ಬೋನ್, 16 ಟ್ರ್ಯಾಪ್ ಕ್ಯಾಮರಾ ಅಳವಡಿಸಲಾಗಿದೆ. ಅರಣ್ಯ ಇಲಾಖೆಯ 50ಕ್ಕೂ ಹೆಚ್ಚು ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ. ಆಗಸ್ಟ್ 5ರಂದು ಕಟ್ಟಡ ಕಾರ್ಮಿಕನ ಮೇಲೆ ಚಿರತೆ ದಾಳಿ ಮಾಡಿತ್ತು.