ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾದ ಶಾಖಾದ್ರಿ ಸೈಯದ್ ಗೌಸ್ ಮೊಹಿದ್ದೀನ್ ಅವರ ನಿವಾಸದ ನಿವಾಸದಲ್ಲಿ ಚಿರತೆ ಚರ್ಮ, ಜಿಂಕೆ ಚರ್ಮ ಪತ್ತೆಯಾಗಿದೆ.
ಶಾಖಾದ್ರಿ ಅವರ ನಿವಾಸದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಜಿಂಕೆ ಚರ್ಮ, ಚಿರತೆ ಚರ್ಮ ಪತ್ತೆಯಾಗಿದ್ದು, ಅವನ್ನು ವಶಕ್ಕೆ ಪಡೆಯಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿನ ಶಾಖಾದ್ರಿಗಳು ಹುಲಿ ಚರ್ಮದ ಮೇಲೆ ಕುಳಿತ ಫೋಟೋಗಳು ಹರಿದಾಡಿದ್ದು, ಶ್ರೀರಾಮ ಸೇನೆ ಕಾರ್ಯಕರ್ತರು ಶುಕ್ರವಾರ ದೂರು ನೀಡಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರಿನ ಮಾರುಕಟ್ಟೆ ರಸ್ತೆಯಲ್ಲಿರುವ ಶಾಖಾದ್ರಿ ಗೌಸ್ ಮೊಹಿದ್ದಿನ್ ಅವರ ನಿವಾಸಕ್ಕೆ ತೆರಳಿದ ಅಧಿಕಾರಿಗಳು ಮನೆಯಲ್ಲಿ ಯಾರೂ ಇಲ್ಲದ ಕಾರಣ ರಾತ್ರಿವರೆಗೂ ಕಾದಿದ್ದಾರೆ. ಸಮೀಪದ ಬಂಧುಗಳು ಬಾಗಿಲು ತೆರೆದು ಪರಿಶೀಲನೆಗೆ ಅವಕಾಶ ನೀಡಿದ್ದಾರೆ. ಪರಿಶೀಲನೆ ವೇಳೆ ಚಿರತೆ ಮತ್ತು ಜಿಂಕೆ ಚರ್ಮ ಪತ್ತೆಯಾಗಿದ್ದು, ಅವುಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.