ಬೆಂಗಳೂರು: ಮಂಡ್ಯದಲ್ಲಿ ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ನೈಸ್ ರಸ್ತೆಯ ಕೊಡಿಗೆಹಳ್ಳಿಯ ಗೊಂಗಡಿಪುರದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕಳೆದ ಎರಡು ತಿಂಗಳಿಂದ ಎರಡು ಮರಿಗಳೊಂದಿಗೆ ಓಡಾಡುತ್ತಿದ್ದ ಚಿರತೆ ನಿನ್ನೆ ರಾತ್ರಿ ಊರಿಗೆ ನುಗ್ಗಿ ನಾಯಿಯನ್ನು ಕೊಂದು ತಿಂದಿದೆ.
ಇದರಿಂದ ಚಿರತೆ ದಾಳಿ ಭೀತಿಯಿಂದ ಗ್ರಾಮಸ್ಥರು ಕಂಗಾಲಾಗಿದ್ದು, ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಚಿರತೆ ದಾಳಿ ನಡೆಸಿ ಹಸುವನ್ನು ಕೊಂದು ತಿಂದಿರುವ ಘಟನೆ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ಪದೇ ಪದೇ ಚಿರತೆ ದಾಳಿ ನಡೆಸುತ್ತಿದ್ದು, ಜನರು ಜೀವ ಭಯದಲ್ಲಿ ಬದುಕುವಂತಾಗಿದೆ.